ಬೆಳಗಾವಿ : ಗ್ಯಾರಂಟಿಗಳ ಹರಿಕಾರ ಮುಖ್ಯಮಂತ್ರಿ ಸಿದ್ಧರಾಮಯ್ಯನವರ 78 ನೇ ಹುಟ್ಟು ಹಬ್ಬವನ್ನು ಧಾರವಾಡ ಜಿಲ್ಲಾ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಬೆಳಗಾವಿಯ “ಸರ್ಕ್ಯೂಟ್ ಹೌಸ್”ನಲ್ಲಿ ಸರಳವಾಗಿ ಆಚರಿಸಲಾಯಿತು
ಧಾರವಾಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಹೆಗಲ ಮೇಲೆ ಕಂಬಳಿ ಹೊದ್ದು ಕೇಕ್ ಕತ್ತರಿಸಿದ್ದು ವಿಶೇಷವಾಗಿತ್ತು
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಮಲಕಾರಿ, ಓಬಿಸಿ ಘಟಕದ ಮಾಜಿ ಅಧ್ಯಕ್ಷರಾದ ಹೇಮಂತ ಗುರ್ಲಹೊಸೂರ, ಮಹಿಳಾ ಮುಖಂಡರಾದ ಗೌರಮ್ಮ ನಾಡಗೌಡ ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು