ಕೊಪ್ಪಳ: ವಿದೇಶಿಯರು ಹಾಗೂ ದೇಶಿಯರು ಸೇತಿ ಐದು ಜನರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿಯಲ್ಲಿ ಈ ಘಟನೆ ನಡೆದಿದೆ.
ರಾತ್ರಿ ವೇಳೆ ಇಬ್ಬರು ವಿದೇಶಿಯರು ಹಾಗೂ ಹೊರರಾಜ್ಯರ ಮೂರು ಜನರು ತುಂಗಭದ್ರಾ ಎಡದಂಡೆ ನಾಲೆಯ ಬಳಿ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಬೈಕ್ ನಲ್ಲಿ ಬಂದ ಮೂವರು ಅವರೊಂದಿಗೆ ಜಗಳವಾಡಿ ಗಲಾಟೆ ಮಾಡಿದ್ದಾರೆ. ಗಲಾಟೆಯಲ್ಲಿ ಮೂವರಿಗೆ ಗಾಯವಾಗಿದ್ದು ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗಂಗಾವತಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ವಿದೇಶಿಯರು ಸೇರಿ ದೇಶಿಯ ಐದು ಜನರ ಮೇಲೆ ಹಲ್ಲೆ
Shares: