ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಬಳ ಇತ್ತೀಚಿಗೆ ನಡೆದಿದ್ದ ವಿದೇಶ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಹೆಡಮುರಿ ಕಟ್ಟಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿರುವ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು, ಮೂರನೇ ಆರೋಪಿ ಶರಣಬಸವ ಎಂಬಾತನನ್ನು ಬಂಧಿಸಲಾಗಿದ್ದು ಆರೋಪಿಗಳಾದ ಮಲ್ಲೇಶ, ಸಾಯಿಚೇತನನ್ನು ಈಗಾಗಲೇ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದರು.
ಪ್ರಕರಣದಲ್ಲಿ ಬಂಧಿತರಾಗಿರುವ ಈ ಮೂವರು ಆರೋಪಿಗಳು
ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಹಗಲು ಗಾರೆ ಕೆಲಸ, ರಾತ್ರಿ ಕಳ್ಳತನ ಮಾಡುತ್ತಿದ್ದರು. ಸಣ್ಣ ಪುಟ್ಟ ಕಳ್ಳತನ, ಹಲ್ಲೆ, ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದರು.
ಈ ಹಿಂದೆ ಕೋಳಿ, ಬೈಕ್, ಕಿರಾಣಿ ಅಂಗಡಿ ಕಳ್ಳತನ ಆರೋಪದಲ್ಲಿ ಈ ಮೂರು ಜನ ಆರೋಪಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.ಆದರೆ, ಪೊಲೀಸರು ರಾಜಿಸಂಧಾನ ಮಾಡಿ ಬಿಡುತ್ತಿದ್ದರು ಎಂದು ತಿಳಿದುಬಂದಿದೆ. ಪೊಲೀಸರ ಈ ದಿವ್ಯ ನಿರ್ಲಕ್ಷ್ಯ ಇಂತಹ ದೊಡ್ಡ ಕೃತ್ಯಕ್ಕೆ ಕಾರಣವಾಯ್ತಾ ಎಂಬ ಮಾತುಗಳು ಕೇಳಿಬರುತ್ತಿದೆ.
L
