ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ. ಕೊಪ್ಪಳ ತಾಲೂಕಿನ ಹೈದರನಗರ ಬಳಿ ಈ ಘಟನೆ ನಡೆದಿದ್ದು ಅದೃಷ್ಠವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೈದರ ನಗರ, ಕೇಸಲಾಪುರ ದಿಂದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳನ್ನು ಅಳವಂಡಿ ಕಡೆಗೆ ಬಸ್ ಪ್ರಯಾಣಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ಪಲ್ಟಿಯಾಗಿದೆ. ಪರಿಣಾಮವಾಗಿ ಅನೇಕರು ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.